ನಿಸ್ವನ - ಭಾವಗೀತ
ನಿಸ್ವನದ ಭಾಗವಾಗಿ... ಕವನ: ಅಂಬಿಕಾತನಯದತ್ತ ಕವನದ ಕಾಪೀರೈಟ್: ಪುನರ್ವಸು ಬೇಂದ್ರೆ ರಾಗಸಂಯೋಜನೆ/ಗಾಯನ/ವೀಣೆ: ಅಂಶುಮಾನ್ ಕೆ ಆರ್ ಸ್ಟೂಡಿಯೋ/ವಾದ್ಯಸಂಯೋಜನೆ: ಹೇಮಂತ್ ಕುಮಾರ್ ತಾಳವಾದ್ಯ: ಬಿ ಎಸ್ ವೇಣುಗೋಪಾಲ್ ರಾಜು ( ತಬಲಾ ವೇಣು ) ಗಿಟಾರ್: ಡಿ ಶ್ರೀನಿವಾಸ್ ಆಚಾರ್ (ಗಿಟಾರ್ ಶ್ರೀನಿವಾಸ್) ಬಾನ್ಸುರೀ/ಕೊಳಲು: ರಘುನಂದನ್ ರಾಮಕೃಷ್ಣ ಸಿತಾರ್: ಅರ್ಜುನ್ ಆನಂದ್ ರಿದಮ್ ಪ್ಯಾಡ್: ವರದರಾಜ್ ಕೀಬೋರ್ಡ್: ಟೋನಿ ಮ್ಯಾಥ್ಯೂ ಧ್ವನಿತಂತ್ರಜ್ಞಾನ: ಬಾಲಕೃಷ್ಣ ರಾವ್ ಈ ಹಾಡಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಬಿಲಹರಿ ರಾಗವನ್ನು ಕಾಣಬಹುದು. ಇಡೀ ಕವನ ಹೀಗಿದೆ. ಭಾವಗೀತ ೧ “ಭೃಂಗದ ಬೆನ್ನೇರಿ ಬಂತು ಕಲ್ಪನಾ ವಿಲಾಸಾ” ಮಸೆದ ಗಾಳಿ ಪಕ್ಕ ಪಡೆಯುತಿತ್ತು ಸಹಜ ಪ್ರಾಸಾ ಮಿಂಚಿ ಮಾಯವಾಗುತಿತ್ತು ಒಂದು ಮಂದಹಾಸಾ ಭೃಂಗದ ಬೆನ್ನೇರಿ ಬಂತು ………. ೨ ಏನು ಏನು? ಜೇನು ಜೇನು? ಎನೆ ಗಂಗುಂ ಗಾನಾ ಓಂಕಾರದ ಶಂಖನಾದಕಿಂತ ಕಿಂಚಿದೂನಾ ಕವಿಯ ಏಕತಾನ ಕವನದಂತೆ ನಾದಲೀನಾ ಭೃಂಗದ ಬೆನ್ನೇರಿ ಬಂತು ………. ೩ ಒಡಲ ನೂಲಿನಿಂದ ನೇಯುವಂತೆ ಜೇಡ ಜಾಲಾ ತನ್ನ ದೈವರೇಷೆ ಬರೆಯುವಂತೆ ತಾನೆ ಭಾಲಾ ಉಸಿರಿನಿಂದೆ ಹುಡುಕುವಂತೆ ತನ್ನ ಬಾಳ ಮೇಲಾ ಭೃಂಗದ ಬೆನ್ನೇರಿ ಬಂತು ………. ೪ ತಿರುಗುತಿತ್ತು ತನ್ನ ಸುತ್ತು ಮೂಕಭಾವ ಯಂತ್ರಾ ಗರ್ಭಗುಡಿಯ ಗರ್ಭದಲ್ಲಿ ಪಡಿನುಡಿಯುವ ಮಂತ್ರಾ ಮೂಡಿ ಮೂಡಿ ...